ಪರ್ಕಳದಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ ಉದ್ಘಾಟನೆ 

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಪ್ರಯುಕ್ತ ಪರ್ಕಳದಲ್ಲಿ ಸಮಾವೇಶವನ್ನು ಇಂದು ಆಯೋಜಿಸಲಾಯಿತು.

ಕೆಪಿಸಿಸಿ ಉಪಾಧ್ಯಕ್ಷ ಬಿ. ಎಲ್ ಶಂಕರ್ ಮಾತನಾಡಿ, ಸುಳ್ಳು ಭರವಸೆಗಳ ಮೂಲಕ ಅಧಿಕಾರ ಪಡೆದಕೊಂಡ ಬಿಜೆಪಿ, ಇಂದು ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳಿದೆ. ಜನರು ಬೆಲೆ ಏರಿಕೆಯಿಂದ ತತ್ತರಿಸಿದ್ದು, ಸರಕಾರ ಮಾತ್ರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಎಂ. ಎ. ಗಫೂರ್, ರಾಜು ಪೂಜಾರಿ, ಹರೀಶ್ ಕಿಣಿ, ಸುಕುಮಾರ್, ಅಣ್ಣಯ್ಯ ಶೇರಿಗಾರ್, ಜಯ ಕುಮಾರ್, ಕೃಷ್ಣಮೂರ್ತಿ ಆಚಾರ್ಯ, ಗೀತಾ ವಾಗ್ಲೆೆ, ಪ್ರಸಾದ್‌ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ದಿವಾಕರ್ ಕುಂದರ್, ಮಮತಾ ಶೆಟ್ಟಿ, ಪ್ರಸಾದ್ ರೈ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸ್ವಾಗತಿಸಿದರು, ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.