ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಲಾಗಿರುವ ಉದ್ಯೋಗ ಯೋಜನೆಯ ಉದ್ಘಾಟನಾ ಸಮಾರಂಭವು ಜೂನ್ 20 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಮಣಿಪಾಲ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಆನ್‌ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ. ತೇಜಸ್ವಿನಿ ಗೌಡ,
ಮಂಜುನಾಥ ಭಂಡಾರಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ವಿಷ್ಣುವರ್ಧನ್ ಮತ್ತಿತರರು ಭಾಗವಹಿಸಲಿದ್ದಾರೆ.












