ಬ್ರಹ್ಮಾವರ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಕೋಟ ಇದರ ಸಂಪೂರ್ಣ ಹವಾ ನಿಯಂತ್ರಿತ ಹೂಡೆ ಶಾಖೆಯ ಉದ್ಘಾಟನಾ ಸಮಾರಂಭವು ಡಿ.4 ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಹೂಡೆಯ ಮೀನುಮಾರುಕಟ್ಟೆ ಎದುರಿನ ಸಿಂಧೂರ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಶಾಖೆಯನ್ನು ಉದ್ಘಾಟಿಸಲಿದ್ದು, ಇ-ಸ್ಟ್ಯಾಪಿಂಗ್ ಮತ್ತು ಆರ್.ಟಿ.ಸಿ ಸೌಲಭ್ಯವನ್ನು ಶಾಸಕ ರಘುಪತಿ ಭಟ್, ಭದ್ರತಾ ಕೊಠಡಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಸೇಫ್ ಡಿಪಾಸಿಟ್ ಲಾಕರ್ ಅನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಗಣಕೀಕರಣವನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಕೆ.ಕೊರಗ ಪೂಜಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9448810972 ಅನ್ನು ಸಂಪರ್ಕಿಸಬಹುದು.