ಬಡಗನ್ನೂರು: ಗೆಜ್ಜೆಗಿರಿ ದೇಯಿಬೈದಿತಿ ಕೋಟಿ-ಚೆನ್ನಯ ಮೂಲ ಸ್ಥಾನದಲ್ಲಿ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದಿತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ ಸೇವೆ ಆಟವು ಭಾನವಾರದಂದು ನಡೆಯಿತು.
ಸೋಲೂರು ಮಠದ ಆರ್ಯ-ಈಡಿಗ(ಬಿಲ್ಲವ) ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ, ಯಕ್ಷಗಾನ ಕಲೆ ಈ ದೇಶದ ಸಂಸ್ಕೃತಿ ಮತ್ತು ಕಲೆಯನ್ನು ಪ್ರಚುರ ಪಡಿಸುತ್ತದೆ. ಗೆಜ್ಜೆಗಿರಿಯ ದೇಯಿ ಬೈದೆತಿಯ ಮಣ್ಣಿನಲ್ಲಿ ಯಕ್ಷಗಾನದ ಮೇಳವೊಂದು ಪ್ರಾರಂಭಗೊಂಡಿರುವುದು ಪುಣ್ಯದ ಕ್ಷಣ ಎಂದು ಹೇಳಿದರು.
ಶ್ರೀ ಕ್ಷೇತ್ರ ಕಟೀಲು ದೇಗುಲದ ಆನುವಂಶಿಕ ಅರ್ಚಕ ಸದಾನಂದ ವೆಂಕಟೇಶ ಅಸ್ರಣ್ಣ ಮತ್ತು ಶ್ರೀ ಕ್ಷೇತ್ರಗಿರಿಯ ಅಧ್ಯಕ್ಷ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದರು. ಯುವ ಸಂಶೋಧಕ ಡಾ. ಅರುಣ್ ಉಳ್ಳಾಲ್ ಧರ್ಮದ ಕುರಿತು ಭಾಷಣ ಮಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಶಾಸಕ ಉಮಾನಾಥ್ ಕೋಟ್ಯಾನ್, ಬಿಲ್ಲವ ಮಹಾಮಂಡಾಳದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ನ ನವೀನ್ ಚಂದ್ರ ಡಿ ಸುವರ್ಣ, ಗೆಜ್ಜೆಗಿರಿ ಕ್ಷೇತ್ರದ ನಿಕಟಪೂರ್ವ ಅಧ್ಯಕ್ಷ ಜಯಂತ ನಡುಬೈಲು, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಅರಸ್, ದುಬೈ ಬಿಲ್ಲವಾಸ್ ಅಧ್ಯಕ್ಷ ಪ್ರಭಾಕರ ಸುವರ್ಣ ಕರ್ನಿರೆ, ಡಾ. ಅಣ್ಣಯ್ಯ ಕುಲಾಲ್ ಉಳ್ತೂರು, ಉದ್ಯಮಿ ರಕ್ಷಿತ್ ಶಿವರಾಮ್, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕೆಡೆಂಜಿ, ಯಾದವ ಕೋಟ್ಯಾನ್ ಪೆರ್ಮುದೆ, ಕಮಲಾಕ್ಷಿ ಪೂಜಾರಿ ಮಂಗಳೂರು, ಕಂಡನಾಡಿ ಗರಡಿ ಅಧ್ಯಕ್ಷ ಚಿತ್ತರಂಜನ್, ಸುಜೀತ್ ಬಂಗೇರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಮೇಳದ ವ್ಯವಸ್ಥಾಪಕ ಪ್ರಶಾಂತ್ ಪೂಜಾರಿ ಮಸ್ಕತ್ ಪ್ರಸ್ತಾವಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಪ್ರ. ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿ, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ವಂದಿಸಿದರು. ದಿನೇಶ ಸುವರ್ಣ ರಾಯಿ ನಿರೂಪಿಸಿದರು.