ಮುನಿಯಾಲು: ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2023- 24 ರ ಸಾಲಿನ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭ ಜೂನ್ 27 ರಂದು ನಡೆಯಿತು.
ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ವಿ.ಸುನೀಲ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶೈಕ್ಷಣಿಕ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಸಂಸ್ಥೆಯ ಸಮಗ್ರ ಅಭಿವೃದ್ಧಿಗೆ ಸಕಲ ಸಹಕಾರದ ಭರವಸೆಯನ್ನು ನೀಡಿದರು.
ಸಂಸ್ಥೆಯ ಪ್ರಾಂಶುಪಾಲೆ ಬೇಬಿ ಶೆಟ್ಟಿ.ಕೆ ಅತಿಥಿಗಳನ್ನು ಸ್ವಾಗತಿಸಿ ಸಂಸ್ಥೆಯ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಹರೀಶ್ ಪೂಜಾರಿ ಮಾತನಾಡಿ, ಸಂಸ್ಥೆಯ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಪದಾಧಿಕಾರಿಗಳು ಒಂದು ತಂಡವಾಗಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು.
ವರಂಗ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಎಂ.ಹೆಬ್ಬಾರ್ ಅಧ್ಯಕ್ಷತೆ ವಹಿಸಿ ಹೊಸ ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಸಂಸ್ಥೆಯ ಇತಿಹಾಸ ಉಪನ್ಯಾಸಕಿ ಜಯಶ್ರೀ ನೂತನವಾಗಿ ಚುನಾಯಿತರಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್, ಪೂರ್ವ ಪ್ರಾಥಮಿಕ ಪೋಷಕರ ಸಂಘದ ಅಧ್ಯಕ್ಷ ಅಶೋಕ್ ನಾಯ್ಕ್, ಕೆ.ಪಿ.ಎಸ್.ಪ್ರಾಥಮಿಕ ವಿಭಾಗದ ಹಿರಿಯ ಶಿಕ್ಷಕಿ ಭಾರತಿ, ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಆಕಾಶ್, ಪ್ರೌಢಶಾಲಾ ವಿದ್ಯಾರ್ಥಿ ಸರಕಾರದ ನಾಯಕ ವಿನೀತ್ ಹೆಗ್ಡೆ, ಪ್ರಾಥಮಿಕ ವಿಭಾಗ ವಿದ್ಯಾರ್ಥಿ ನಾಯಕ ಅನ್ವಿತ್ .ಎಸ್ ಶೆಟ್ಟಿ ಹಾಗೂ ಎಲ್ಲಾ ವಿದ್ಯಾರ್ಥಿ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ಉಪ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಬೋರ್ಕರ್ ವಂದಿಸಿದರು. ಗಣಿತ ಉಪನ್ಯಾಸಕ ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.