ಕಟಪಾಡಿ: ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದ ನೂತನ ಪ್ರಧಾನ ಕಚೇರಿ ಕಟ್ಟಡ “ಸಹಕಾರ ಸೌಧ”ದ ಉದ್ಘಾಟನಾ ಸಮಾರಂಭ ನಾಳೆ (ಅ.10) ಬೆಳಿಗ್ಗೆ 10.30ಕ್ಕೆ ಎನ್.ಎಚ್. 66, ಕೆನರಾ ಬ್ಯಾಂಕ್ ಹಿಂಬದಿ, ಕಟಪಾಡಿ ಇಲ್ಲಿ ನಡೆಯಲಿದೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೂತನ ಕಟ್ಟಡವನ್ನು ಉದ್ಘಾಟಿಸುವರು. ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಇಂದುಶೇಖರ್ ಸುವರ್ಣ ಅಧ್ಯಕ್ಷತೆ ವಹಿಸುವರು. ಇಂಧನ ಸಚಿವ ವಿ. ಸುನಿಲ್ ಕುಮಾರ್ ಸಭಾಂಗಣ ಉದ್ಘಾಟಿಸುವರು. ಶಾಖಾ ಕಚೇರಿಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎನ್.ಎಂ. ರಾಜೇಂದ್ರ ಕುಮಾರ್ ಉದ್ಘಾಟಿಸುವರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಭದ್ರತಾ ಕೊಠಡಿಯನ್ನು ಉದ್ಘಾಟಿಸುವರು. ಗೋದಾಮು ಕಟ್ಟಡವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸುವರು. ಉದ್ಯಮಿ ಮತ್ತು ಸಮಾಜ ಸೇವಕ ಗುರ್ಮೆ ಸುರೇಶ್ ಶೆಟ್ಟಿ ಗಣಕಯಂತ್ರವನ್ನು ಉದ್ಘಾಟಿಸುವರು.
ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಭಾರತಿ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ಅರುಣ್ ಕುಮಾರ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಮತ್ತು ರಾಜೇಶ್ ರಾವ್ ಪಾಂಗಾಳ, ಕಟಪಾಡಿ ಗ್ರಾಪಂ ಅಧ್ಯಕ್ಷೆ ಇಂದಿರಾ ಆಚಾರ್ಯ, ಕೋಟೆ ಗ್ರಾಪಂ ಅಧ್ಯಕ್ಷ ಕಿಶೋರ್ ಅಂಬಾಡಿ, ಉದ್ಯಾವರ ಗ್ರಾಪಂ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸಂಘದ ಉಪಾಧ್ಯಕ್ಷೆ ಸರೋಜಿನಿ ಕೆ. ಶೆಟ್ಟಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಶೀಲಾ ಪಿ. ಕರ್ಕೇರ ತಿಳಿಸಿದ್ದಾರೆ .