ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಸೆ.11 ರಿಂದ 16 ರವರೆಗೆ ನಡೆಯುವ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಡುಪಿ ವಿಧಾನಸಬಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಇವರು ನೆರವೇರಿಸಿದರು.

ನಂತರ ಮಾತನಾಡಿದ ಅವರು ಮಿಷನ್ ಇಂದ್ರಧನುಷ್ ಅವಧಿಯಲ್ಲಿ, ಜಿಲ್ಲೆಯ 0-5 ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರು, ಲಸಿಕೆ ವಂಚಿತ ಮಕ್ಕಳು ದಡಾರ ರುಬೆಲ್ಲಾ ಇನ್ನಿತರ ನಿಗದಿತ ಲಸಿಕೆ ಪಡೆದು ಆರೋಗ್ಯವಂತ ಜಿಲ್ಲೆಯನ್ನಾಗಿಸಲು ಹಾಗೂ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ವಿದ್ಯಾ ಕುಮಾರಿ ಮಾತನಾಡಿ, ಲಸಿಕೆಯ ಮಹತ್ವವನ್ನು ಅರಿತು ಲಸಿಕೆ ವಂಚಿತ ಮಕ್ಕಳು ಎರಡನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಲಸಿಕಾ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಇತರೆ ಇಲಾಖೆಗಳ ಸಹಯೋಗದಲ್ಲಿ ಈ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು
ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಂಡು ಸ್ಥಸ್ಥ ಸಮಾಜದ ನಿರ್ಮಾಣಕ್ಕೆ ಸಹಕರಿಸುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರು, ರೋಟರಿ ಅಧಿಕಾರಿಗಳು, ಉಡುಪಿ ನಗರಸಭಾ ಆಯುಕ್ತರು, ಜಿಲ್ಲಾ
ಆರ್.ಸಿ.ಹೆಚ್.ಅಧಿಕಾರಿಗಳು, ಜಿಲ್ಲಾ ಸರ್ಜನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು,ಡಿಪಿಸಿ-ಆರ್.ಸಿ.ಹೆಚ್, ಎಮ್ ಎಂಡ್ ಇ ವ್ಯವಸ್ಥಾಪಕರು, ವಿಸಿಸಿಎಮ್, ಐಎಫ್.ವಿ ಮತ್ತು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.