ಬ್ರಹ್ಮಾವರ: ಬ್ರಹ್ಮಾವರವು ತಾಲೂಕು ಕೇಂದ್ರವಾಗಿದ್ದು, ಆ.5 ರಂದು ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆಗೊಳ್ಳಲಿದೆ ಎಂದು ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ ತಿಳಿಸಿದರು.
ನಗರದಲ್ಲಿ ಗುರುವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ನ್ಯಾಯಾಲಯ ಕಟ್ಟಡದ ಉದ್ಘಾಟನೆಯನ್ನು ಬೆಳಿಗ್ಗೆ 10.30 ಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಜಿಲ್ಲಾ ನ್ಯಾಯಾಂಗ ಕಟ್ಟಡ ಸಮಿತಿಯ ಅಧ್ಯಕ್ಷ ಪಿ.ಎಸ್.ದಿನೇಶ್ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ ಅರುಣ್ ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ಬ್ರಹ್ಮಾವರ ವಕೀಲರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬ್ರಹ್ಮಾವರ ವಕೀಲರ ಸಂಘದ ಕಾರ್ಯದರ್ಶಿ ಶ್ರೀಪಾದ ರಾವ್, ಖಜಾಂಜಿ ಸ್ಟೀವನ್ ಊವಿಸ್, ಜೊತೆ ಕಾರ್ಯದರ್ಶಿ ಮೊಹಮ್ಮದ್ ಸುಹಾನ್ ಉಪಸ್ಥಿತರಿದ್ದರು.