ಬ್ರಹ್ಮಾವರ: ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನೆ

ಬ್ರಹ್ಮಾವರ: ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನೆಯು ಇಂದು ಬೆಳಗ್ಗೆ 10.30ಕ್ಕೆ ನೆರವೇರಿತು. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲಾ ನ್ಯಾಯಾಂಗ ಕಟ್ಟಡ ಸಮಿತಿ ಅಧ್ಯಕ್ಷ ಪಿ.ಎಸ್‌. ದಿನೇಶ್‌ ಕುಮಾರ್‌ ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟಿಸಿದರು.

ಜಿಲ್ಲಾ ನ್ಯಾಯಾಂಗ ಉಡುಪಿ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ ಬ್ರಹ್ಮಾವರದ ಆಶ್ರಯದಲ್ಲಿ ಬ್ರಹ್ಮಾವರ ಬಂಟರ ಭವನದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ. ಅರುಣ್‌ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಸಚಿವ ಎಚ್‌.ಕೆ. ಪಾಟೀಲ್‌, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಜಿಲ್ಲಾ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉಪಸ್ಥಿತರಿದ್ದರು.