ನ್ಯೂ ಉಡುಪಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಉಡುಪಿ: ನ್ಯೂ ಉಡುಪಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ಉಡುಪಿ ಸಂತೆಕಟ್ಟೆ ಕಲ್ಯಾಣಪುರದ ಜಿಎಸ್‌ಜೆ ಗ್ಯಾಲಕ್ಸಿ ಕಾಂಪ್ಲೆಕ್ಸ್ ನಲ್ಲಿ ಸೋಮವಾರ ಶುಭಾರಂಭಗೊಂಡಿತು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಮಂಜುನಾಥ ಎಸ್.ಕೆ. ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ನೂತನ ಸೊಸೈಟಿಯನ್ನು ಉದ್ಘಾಟಿಸಿದರು.

ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಅವರು ಸೊಸೈಟಿಯ ವ್ಯವಹಾರದ ವಿಭಾಗವನ್ನು‌ ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತ್ತಿಪರ ನಿರ್ದೇಶಕ ಬೋಳ ಸದಾಶಿವ ಶೆಟ್ಟಿ, ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಅಧ್ಯಕ್ಷ ಭಾಸ್ಕರ್ ಕಾಮತ್, ಸಂಹಿತ ಸೌಹಾರ್ದ ಸಹಕಾರ ಸೊಸೈಟಿಯ ಅಧ್ಯಕ್ಷ ಬೆಲ್ಮಾರು ರಾಘವೇಂದ್ರ ಭಟ್, ಉಡುಪಿ ನಗರಸಭಾ ಸದಸ್ಯ ಮಂಜುಳ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.