ಶ್ರೀಕೃಷ್ಣಜನ್ಮಾಷ್ಟಮಿ ಅಷ್ಟದಿನೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಶ್ರೀಕೃಷ್ಣಜನ್ಮಾಷ್ಟಮಿ ಅಷ್ಟದಿನೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ನೆರವೇರಿಸಿ ಅನುಗ್ರಹಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಗೋಪಾಲಕೃಷ್ಣ ಉಪಾಧ್ಯಾಯ,ಪರ್ಯಾಯ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.