ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಸರಕಾರಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ಅ 20 ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವು ನಡೆಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಯೋಜನೆಗೊಂಡ ಈ ರಕ್ತದಾನ ಶಿಬಿರವನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ನವರಾತ್ರಿಯ‌ ಶುಭಾಶಯವನ್ನು ತಿಳಿಸಿ‌ ರಕ್ತದಾನ ಎಂಬ ಪುಣ್ಯದ ಕೆಲಸದಿಂದ ಹಲವರ ಜೀವ ಉಳಿಸಬಹುದು ಹಾಗೂ ರಕ್ತದಾನದಿಂದ ನಮ್ಮಲ್ಲಿ ಸಾಮಾಜಿಕ ಕಳಕಳಿಯನ್ನು ಉದ್ದೀಪನಗೊಳಿಸಲು ಇದು ಸಹಕಾರಿಯಾಗಬಲ್ಲದು ಎಂದು ತಿಳಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ನಡೆದ ಈ ಬೃಹತ್ ರಕ್ತದಾನ ಶಿಬಿರವನ್ನು ಶ್ಲಾಘಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು,‌ ಪಕ್ಷದ ಮುಖಂಡರಾದ ಮುನಿಯಾಲು ಉದಯ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಎಂ ಏ ಗಫೂರ್, ವೆರೋನಿಕಾ ಕರ್ನೇಲಿಯೋ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ದಿನಾಕರ್ ಹೇರೂರು, ಪ್ರಖ್ಯಾತ್ ಶೆಟ್ಟಿ, ಸೌರಭ್ ಬಲ್ಲಾಳ್, ಮಮತಾ ಶೆಟ್ಟಿ, ಸಮಾಜ ಸೇವಕರಾದ ಈಶ್ವರ್ ಮಲ್ಪೆ, ಸರ್ಕಾರಿ ಜಿಲ್ಲಾಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ವೀಣಾ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಸ್ವಾಗತಿಸಿ ಪ್ರಾಸ್ತಪನೆಗೈದು ಎಲ್ಲಾ ರಕ್ತದಾನಿಗಳನ್ನು ಅಭಿನಂದಿಸಿದರು. ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ 160 ಯೂನಿಟ್‌ಗೂ ಮಿಕ್ಕಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಕ್ತಾರ ಸತೀಶ್ ಕೊಡವೂರು ಅವರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಮಾರ್ ಮಂಚಿ ವಂದಿಸಿದರು.