ಉಡುಪಿ: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದಡಿ ಪರಿಶಿಷ್ಟ ಜಾತಿಯ 2026-27 ನೇ ಸಾಲಿನಲ್ಲಿ ಉತ್ತೀರ್ಣರಾದ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ವೃತ್ತಿಪರ ತರಬೇತಿ, ಬಿ.ಎ, ಬಿ.ಎಸ್ಸಿ, ಬಿ.ಕಾಂ., ಬಿ.ಬಿ.ಎ, ಬಿ.ಬಿ.ಎಂ, ಬಿ.ಸಿ.ಎ, ಇತರ ಪದವಿ, ಬಿ.ಎಡ್, ಬಿ.ಪಿ.ಎಡ್, ಎಂ.ಎ., ಎಂ.ಎಸ್ಸಿ, ಎಂ.ಕಾo, ಎಂ.ಎಸ್.ಡಬ್ಲ್ಯೂ, ಎಂ.ಬಿ.ಎ, ಎಂ.ಎಡಿ, ಎಂ.ಪಿ.ಐ.ಡಿ, ಜೆ.ಇ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಎಂ.ಟೆಕ್, ಎಂ.ಇ, ಎಂ.ಡಿ., ಎಂ.ಎಸ್ ಇತರ ಇನ್ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ಆಸಕ್ತ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿಯ ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ ಪಡೆಯಲು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಪೂರಕ ದಾಖಲಾತಿಗಳನ್ನು ಜೂನ್ 17 ರ ಒಳಗಾಗಿ ನಗರಸಭಾ ಕಛೇರಿಗೆ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.

















