ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ಮದುವೆಯಾಗುವ ಪರಿಶಿಷ್ಟ ಜಾತಿಯ ವಿಧವೆಯರಿಗೆ 3 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡುವ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಒಂದು ವಾರದ ಒಳಗೆ ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.