ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಬೀದಿ ಬದಿ ವ್ಯಾಪಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಸಮೃದ್ಧಿ ಯೋಜನೆಯಡಿ ₹ 10 ಸಾವಿರ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574978 ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.