ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ 2018 ರ ವಸತಿ ರಹಿತ ಮತ್ತು ನಿವೇಶನ ರಹಿತರ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲು ಮೇ 15 ರ ವರೆಗೆ ಅಂತಿಮ ಕಾಲಾವಕಾಶ ಕಲ್ಪಿಸಲಾಗಿದ್ದು, ಅರ್ಹ ಫಲಾನುಭವಿಗಳು ಅರ್ಜಿಯನ್ನು ಸಮೀಪದ ಗ್ರಾಮ ಪಂಚಾಯತ್ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

















