ಹುಬ್ಬಳ್ಳಿ: ಇಲ್ಲಿನ ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಹಿಂದೂ ಯುವತಿಯರ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ಫೋಟೋ ಪೋಸ್ಟ್ ಎಡಿಟ್ ಮಾಡಿ ಹುಬ್ಬಳ್ಳಿ ಪೊಲೀಸರಿಗೆ ಚಾಲೆಂಜ್ ಮಾಡಿರುವ ಘಟನೆ ವರದಿಯಾಗಿದೆ.
ಧಮ್ ಇದ್ದರೆ ನನ್ನನ್ನು ಹಿಡಿಯಿರಿ ಎಂದು ಆತನ್ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ.
ಹುಬ್ಬಳ್ಳಿಯ ಸಮರ್ಥ ಕಾಲೇಜಿನ ಎನ್ನಲಾದ ವಿದ್ಯಾರ್ಥಿಯೊಬ್ಬ ಕಿಡಿಗೇಡಿತನ ತೋರಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದಾನೆ ಎನ್ನಲಾಗಿದೆ. ಡಿಸಿಪಿ ಗೋಪಾಲ ಬ್ಯಾಕೋಡ್ ವಿದ್ಯಾರ್ಥಿ ಹಾಗೂ ಶಾಲಾ ಪ್ರಾಂಶುಪಾಲರ ವಿಚಾರಣೆ ನಡೆದಿದೆ ಎನ್ನಲಾಗಿದೆ.