ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಾಗರಿಕ ಸಮಿತಿಯ ಕಚೇರಿಯ ಮುಂಭಾಗದಲ್ಲಿ 20×14 ಅಡಿ ವಿಸ್ತೀರ್ಣದ ಬೃಹತ್ ರಾಷ್ಟ್ರಧ್ವಜವನ್ನು ಪ್ರದರ್ಶಿಸುವ ಮೂಲಕ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಮೆರುಗು ನೀಡಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭೀಮಾ ಜುವೆಲ್ಲರ್ಸ್‌ನ ಮ್ಯಾನೇಜರ್ ಆಶೀಶ್ ಅವರು ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಿತ್ರ ಸ್ಕೂಲ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲೆ ವನಿತಾ, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.















