ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಜಾರ್ಜ್ ಸ್ಯಾಮ್ಯುಯೆಲ್, ಶತಮಾನೋತ್ಸವ ಸಮಿತಿ ಸಂಚಾಲಕರಾದ ಪುರುಷೋತ್ತಮ್ ಪಿ. ಶೆಟ್ಟಿ, ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು. ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ವಂದಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.












