ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ :ಸನ್ಮಾನ ಸಮಾರಂಭ

ಗಂಗೊಳ್ಳಿ : ವಿದ್ಯಾದಾನ ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು, ವಿದ್ಯೆಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಇಂದಿನ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಎಲ್ಲಾ ರೀತಿಯ ವ್ಯವಸ್ಥೆಗಳಿದ್ದು, ಮಕ್ಕಳಿಗೆ ವಿದ್ಯಾಭ್ಯಾಸ ನೀಡುವಲ್ಲಿ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು. ಎಂದು ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಹೇಳಿದರು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ವಿ.ಪೈ ಸಭಾಂಗಣದಲ್ಲಿ ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇವರ ಆಶ್ರಯದಲ್ಲಿ ಭಾನುವಾರ ಜರಗಿದ ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಉದ್ಯಮಿ ಮಂತಿ ಸಂತೋಷ ಖಾರ್ವಿ, ನಿವೃತ್ತ ಮುಖ್ಯೋಪಾಧ್ಯಾಯ ಮುಡೂರ ಅಂಬಾಗಿಲು, ಕರ್ಣಾಟಕ ಬ್ಯಾಂಕ್ ಹೊನ್ನಾವರ ಶಾಖೆಯ ಪ್ರಬಂಧಕ ಮಹಾಬಲ ಕೆ. ಶುಭಾಶಂಸನೆಗೈದರು. ಇದೇ ಸಂದರ್ಭ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಬಿ.ಪ್ರಸನ್ನಾ ಪೈ, ಅಕ್ಷಯ್ ಯು. ಮೇಲ್‌ಗಂಗೊಳ್ಳಿ, ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಸುಕೇಶ ವಿ.ದೇವಾಡಿಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ ಮಕ್ಕಳಿಗೆ ಡಾ.ಕಲಾಶ್ರೀ ಕೊಡ ಮಾಡಿದ ನೋಟ್ಸ್ ಪುಸ್ತಕ ವಿತರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಎ’ ಒಕ್ಕೂಟದ ಅಧ್ಯಕ್ಷೆ ಸುಮಿತ್ರಾ, ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಖಜಾಂಚಿ ಕರುಣಾಕರ ಕೆ. ಮರವಂತೆ, ಇಂದುಧರ ಯುವಕ ಮಂಡಲದ ಅಧ್ಯಕ್ಷ ಸುದೀಪ ಜಿ.ಎನ್., ಗೌರವಾಧ್ಯಕ್ಷ ಗುರುರಾಜ್ ಬಿ., ಕಾರ್ಯದರ್ಶಿ ಶ್ರೀನಿವಾಸ ಬಿ., ಕುಮಾರ ಜಿ.ಟಿ. ಮತ್ತಿತರರು ಉಪಸ್ಥಿತರಿದ್ದರು.
ದೇವಸ್ಥಾನದ ಅಧ್ಯಕ್ಷ ಸುಂದರ ಜಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಸುರೇಶ ಜಿಎಫ್‌ಸಿಎಸ್ ವಂದಿಸಿದರು.