ಟೋಕಿಯೋ: ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತೀಯ ಪುರುಷರ ಹಾಕಿ ತಂಡವು ಗುರುವಾರ ಗ್ರೂಪ್ ಹಂತದ ನಾಲ್ಕನೇ ಪಂದ್ಯದಲ್ಲಿ ಪ್ರಬಲ ಅರ್ಜೆಂಟೈನಾ ವಿರುದ್ಧ 3-1 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಕ್ವಾರ್ಟರ್ ಫೈನಲ್’ಗೆ ಲಗ್ಗೆ ಇಟ್ಟಿದೆ.
2016ರ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದ ಅರ್ಜೆಂಟಿನಾವನ್ನು ಮನ್ಪ್ರೀತ್ ಸಿಂಗ್ ಪಡೆ 3-1 ಗೋಲುಗಳ ಅಂತರದಿಂದ ಸೋಲು ಕಾಣುವಂತೆ ಮಾಡಿದೆ. ಇದರಂತೆ ಭಾರತ ಕ್ವಾರ್ಟರ್ ಫೈನಲ್ನಲ್ಲಿ ಜುಲೈ 30 ರಂದು ಜಪಾನ್ ವಿರುದ್ಧ ಸೆಣೆಸಾಡಲಿದೆ.