ಚೆನ್ನೈ: ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡವು 227 ರನ್ಗಳ ಸೋಲು ಕಂಡಿದೆ.
ಇಂಗ್ಲೆಂಡ್ ನೀಡಿದ್ದ 420 ರನ್ಗಳ ಗುರಿ ಬೆನ್ನತ್ತಿದ ಕೊಹ್ಲಿ ಪಡೆ 192 ರನ್ಗಳಿಗೆ ಆಲೌಟ್ ಆಯಿತು. ಭಾರತ ನಾಲ್ಕನೇ ದಿನದಾಟದ ಮುಕ್ತಾಯಕ್ಕೆ ಒಂದು ವಿಕೆಟ್ ಕಳೆದುಕೊಂಡು 39 ರನ್ ಗಳಿಸಿತ್ತು. ಐದನೇ ದಿನದಾಟದಲ್ಲಿ ನಾಯಕ ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಹೊರತುಪಡಿಸಿ ಯಾರೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಕೊಹ್ಲಿ ಅವರ 72, ಶುಭಮನ್ ಗಿಲ್ ಅವರ 50 ರನ್ ಹೊರತಾಗಿಯೂ ಇಂಗ್ಲೆಂಡ್ ಬೌಲರ್ಗಳ ಎದುರು ಟೀಂ ಇಂಡಿಯಾದ ಆಟ ಹೆಚ್ಚು ಹೊತ್ತು ನಡೆಯಲಿಲ್ಲ.
ಇಂಗ್ಲೆಂಡ್ ಪರ ಸ್ಪಿನ್ನರ್ ಜ್ಯಾಕ್ ಲೀಚ್ ಅವರು ನಾಲ್ಕು ವಿಕೆಟ್ ಕಬಳಿಸಿದರು. ಜೇಮ್ಸ್ ಆ್ಯಂಡರ್ಸನ್ ಮೂರು ವಿಕೆಟ್ ಪಡೆದರು. ಜೋಫ್ರಾ ಆರ್ಚರ್, ಬೆನ್ ಸ್ಟೋಕ್ಸ್ ಹಾಗೂ ಡೋಮ್ ಬೆಸ್ ತಲಾ ಒಂದು ವಿಕೆಟ್ ಗಳಿಸಿದರು.
ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 578 ರನ್ ಗಳಿಸಿತ್ತು. ಪ್ರತಿಯಾಗಿ ಭಾರತವು ಮೊದಲ ಇನ್ನಿಂಗ್ಸ್ನಲ್ಲಿ 337 ರನ್ಗಳಿಗೆ ಆಲೌಟ್ ಆಗಿತ್ತು. ಎರಡನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವು 178 ರನ್ ಕಲೆಹಾಕಿತ್ತು.