ವೆಸ್ಟ್ ಇಂಡೀಸ್ ವರ್ಸಸ್ ಭಾರತ: ಏಕದಿನ ಪಂದ್ಯದಲ್ಲಿ ಭಾರತಕ್ಕೆ 2 ವಿಕೆಟ್‌ಗಳ ಜಯ; ಸರಣಿಯಲ್ಲಿ 2-0 ಮುನ್ನಡೆ

ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಿನ್ನೆ ರಾತ್ರಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 2 ವಿಕೆಟ್‌ಗಳಿಂದ ಸೋಲಿಸಿದ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. 312 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಭಾರತ 49.4 ಓವರ್‌ಗಳಲ್ಲಿ 8 ವಿಕೆಟ್‌ಗೆ 312 ರನ್ ಗಳಿಸಿತು. ಅಕ್ಷರ್ ಪಟೇಲ್ ಅಜೇಯ 64 ರನ್ ಮತ್ತು ಶ್ರೇಯಸ್ ಅಯ್ಯರ್ 63 ರನ್ ಗಳಿಸಿದರು.

ಇದಕ್ಕೂ ಮುನ್ನ ಆತಿಥೇಯರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿತು. ಓಪನರ್ ಶಾಯ್ ಹೋಪ್ 115 ರನ್ ಗಳಿಸಿದರೆ, ನಾಯಕ ನಿಕೋಲಸ್ ಪೂರನ್ 74 ರನ್ ಗಳಿಸಿದರು. ವೆಸ್ಟ್ ಇಂಡೀಸ್ ಬ್ಯಾಟರ್ ಶಾಯ್ ಹೋಪ್ ತಮ್ಮ 100ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಹತ್ತನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಹೋಪ್ಈ, ಸಾಧನೆ ಮಾಡಿದ ವೆಸ್ಟ್ ಇಂಡೀಸ್‌ನ ನಾಲ್ಕನೇ ಬ್ಯಾಟರ್ ಆಗಿದ್ದಾರೆ. ಭಾರತದ ಪರ ಶಾರ್ದೂಲ್ ಠಾಕೂರ್ 54ಕ್ಕೆ 3 ವಿಕೆಟ್ ಕಬಳಿಸಿದರು.

ಮೂರನೇ ಮತ್ತು ಅಂತಿಮ ಏಕದಿನ ಪಂದ್ಯವು ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಬುಧವಾರ ನಡೆಯಲಿದೆ. ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.