ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮಹತ್ವದ ಸಾಧನೆ ಮಾಡುವ ಮೂಲಕ ಭಾರತ 100 ಪದಕಗಳ ಗಡಿಯನ್ನು ಮುಟ್ಟಿದೆ. ಭಾರತೀಯ ಕ್ರೀಡಾಪಟುಗಳ ಅಸಾಧಾರಣ ಪ್ರತಿಭೆ, ಸಮರ್ಪಣೆ ಮತ್ತು ಪರಿಶ್ರಮವು ಈ ಯಶಸ್ಸಿಗೆ ಕಾರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಈ ಮೈಲಿಗಲ್ಲನ್ನು ಶ್ಲಾಘಿಸಿದ್ದಾರೆ.












