ಕೋಲ್ಕತ್ತಾ: ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆಸಲು ಎರಡು ದೇಶಗಳ ಪ್ರಧಾನ ಮಂತ್ರಿಗಳ ಅನುಮೋದನೆ ಬೇಕು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.
ಬಿಸಿಸಿಐ ನೂತನ ಅಧ್ಯಕ್ಷ ಸ್ಥಾನ ಪಡೆದ ಬಳಿಕ ಗಂಗೂಲಿ ಅವರು ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆಸಲು ಎರಡು ದೇಶದ ಪ್ರಧಾನ ಮಂತ್ರಿಗಳ ಅನುಮೋದನೆ ಬೇಕು ಎಂದು ತಿಳಿಸಿದ್ದಾರೆ.
ಯಾವಾಗ ದ್ವಿಪಕ್ಷೀಯ ಸರಣಿ ನಡೆಯಬೇಕು ಎಂಬುದನ್ನು ನೀವು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅನ್ನು ಕೇಳಬೇಕು. ಇದು ದೇಶ ತೆಗೆದುಕೊಂಡಿರುವ ನಿರ್ಧಾರ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾವು ಆಟವಾಡಬೇಕು ಎಂದರೆ ದೇಶದ ಅನುಮತಿ ಇರಬೇಕು. ಅದ್ದರಿಂದ ಈ ಪ್ರಶ್ನೆಗೆ ನಮ್ಮ ಬಳಿ ಉತ್ತರವಿಲ್ಲ ಎಂದು ಹೇಳಿದ್ದಾರೆ.