ನವದೆಹಲಿ: ಶನಿವಾರದಂದು ಭಾರತವು 3,000 ಮೆಟ್ರಿಕ್ ಟನ್ ಗೋಧಿಯನ್ನು ಮತ್ತೊಮ್ಮೆ ಅಫ್ಘಾನಿಸ್ತಾನಕ್ಕೆ ಕಳುಹಿಸಿಕೊಟ್ಟಿದೆ. ಅಫ್ಘಾನ್ ಜನರಿಗೆ ಮಾನವೀಯ ನೆರವು ನೀಡುವ ಭಾರತದ ಬದ್ಧತೆ ಅಚಲವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ಇಲ್ಲಿಯವರೆಗೆ, ಭಾರತವು ವಿಶ್ವ ಆಹಾರ ಕಾರ್ಯಕ್ರಮದ ಸಹಭಾಗಿತ್ವದಲ್ಲಿ ಅಫ್ಘಾನಿಸ್ತಾನಕ್ಕೆ 33,500 ಮೆಟ್ರಿಕ್ ಟನ್ ಗೋಧಿ ಸಾಗಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.