ಮುಂದಿನ ಎರಡು ವರ್ಷದೊಳಗೆ ಭಾರತ ಟೋಲ್ ಬೂತ್ ಮುಕ್ತವಾಗಲಿದೆ: ನಿತಿನ್ ಗಡ್ಕರಿ

ನವದೆಹಲಿ: ಮುಂದಿನ ಎರಡು ವರ್ಷದೊಳಗೆ ಭಾರತದ ಎಲ್ಲ ಹೆದ್ದಾರಿಗಳನ್ನು ಟೋಲ್​ಬೂತ್ ಮುಕ್ತಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ದೇಶಾದ್ಯಂತ ಹೆದ್ದಾರಿಗಳಲ್ಲಿ ತಡೆರಹಿತ ಸಂಚಾರಕ್ಕೆ ಅವಕಾಶ ಕಲ್ಪಿಸಲು ಟೋಲ್ ಸಂಗ್ರಹಕ್ಕೆ ಜಿಪಿಎಸ್ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದರು.

ವಾಹನಗಳ ತಡೆರಹಿತ ಚಾಲನೆ ಇನ್ಮುಂದೆ ಟೋಲ್ ಬೂತ್​ನಲ್ಲಿ ಕಟ್ಟಬೇಕಾದ ಶುಲ್ಕವನ್ನು ಮುಂದಿನ ದಿನಗಳಲ್ಲಿ ಚಾಲಕರ ಬ್ಯಾಂಕ್ ಖಾತೆಯಿಂದಲೇ ಕಡಿತಗೊಳಿಸಲಾಗುತ್ತದೆ. ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಿಪಿಎಸ್ ತಂತ್ರಜ್ಞಾನ ಆಧಾರಿತ ಟೋಲ್ ಶುಲ್ಕ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಹೇಳಿದರು.