ಏಷ್ಯಾಕಪ್ 2023: ಟಾಸ್ ಗೆದ್ದ ಭಾರತ; ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ

2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟೀಂ ಇಂಡಿಯಾ ಟಾಸ್ ಗೆದ್ದಿದ್ದು ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. 4 ವರ್ಷಗಳ ಬಳಿಕ ಇತ್ತಂಡಗಳು ಏಕದಿನ ಕ್ರಿಕೆಟ್ ನಲ್ಲಿ ಮುಖಾಮುಖಿಯಾಗಿವೆ. 2019ರ ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ತಂಡಗಳು ಎದುರುಬದುರಾಗಿದ್ದವು.

ಭಾರತ ತಂಡವು ಮೂರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ.

ಭಾರತದ ಪರವಾಗಿ ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಇಶಾನ್ ಕಿಶನ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್, ಕುಲ್ದೀಪ್‌ ಯಾದವ್, ಮೊಹಮ್ಮದ್ ಸಿರಾಜ್‌, ಜಸ್ಪ್ರೀತ್ ಬುಮ್ರಾ ಆಡಲಿದ್ದಾರೆ.

ಪಾಕಿಸ್ತಾನದ ಪರವಾಗಿ ಫಖರ್‌ ಜಮಾನ್, ಇಮಾಮ್ ಇಮಾಮ್‌, ಬಾಬರ್‌ ಅಜಂ(ನಾಯಕ), ಮೊಹಮ್ಮದ್ ರಿಜ್ವಾನ್‌, ಅಘಾ ಸಲ್ಮಾನ್‌, ಇಫ್ತಿಕಾರ್‌ ಅಹಮ್ಮದ್, ಶಾಬಾದ್ ಖಾನ್, ಮೊಹಮ್ಮದ್ ನವಾಜ್‌, ಶಾಹೀನ್‌ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್‌ ಆಡಲಿದ್ದಾರೆ.

ಇತ್ತಂಡಗಳ ಮುಖಾಮುಖಿಯಲ್ಲಿ ಪ್ರತಿಬಾರಿಯೂ ಭಾರತವೇ ಮೇಲುಗೈ ಸಾಧಿಸಿದ್ದು ಅಪರೂಪದ ಪ್ರಕರಣಗಳಲ್ಲಿ ಪಾಕಿಸ್ತಾನ ಗೆಲುವು ದಾಖಲಿಸಿದೆ.