41 ವರ್ಷದ ಬಳಿಕ ಒಲಿಂಪಿಕ್ಸ್ ಹಾಕಿಯಲ್ಲಿ ಪದಕ ಗೆದ್ದ ಭಾರತ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗುರುವಾರ ನಡೆದ ಮೂರನೇ ಸ್ಥಾನಕ್ಕಾಗಿ ಹೋರಾಟದಲ್ಲಿ ಭಾರತ ಹಾಕಿ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿ ಕಂಚಿನ ಪದಕ ಜಯಿಸಿತು.

ಈ ಮೂಲಕ ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ ಹಾಕಿ ವಿಭಾಗದಲ್ಲಿ ಭಾರತ ಪದಕ ಗೆದ್ದ ಸಾಧನೆ ಮಾಡಿದೆ. ಇದು ರಾಷ್ಟ್ರೀಯ ಕ್ರೀಡೆ ಹಾಕಿ ಪಾಲಿಗೆ ಐತಿಹಾಸಿಕ ಕ್ಷಣವಾಗಿದೆ.

1980ರ ಮಾಸ್ಕೊ ಒಲಿಂಪಿಕ್ಸ್‌ನಲ್ಲಿ ಭಾರತ ಚಿನ್ನದ ಪದಕ ಜಯಿಸಿತ್ತು. ಈಗ 41 ವರ್ಷಗಳ ಬಳಿಕ ಮತ್ತೆ ಪದಕ ಗೆದ್ದ ಸಾಧನೆ ಮಾಡಿದೆ.

ಪುರುಷ ಹಾಕಿಯಲ್ಲಿ ಮೂರನೇ ಕಂಚಿನ ಪದಕದ ಸಾಧನೆ: ಈ ಹಿಂದೆ 1968ರ ಮೆಕ್ಸಿಕೋ ಸಿಟಿ ಹಾಗೂ 1972ರ ಮ್ಯೂನಿಚ್ ಒಲಿಂಪಿಕ್ಸ್‌ನಲ್ಲೂ ಕಂಚಿನ ಪದಕ ಜಯಿಸಿತ್ತು. ಅಂದ ಹಾಗೆ ಪುರುಷ ಹಾಕಿಯಲ್ಲಿ ಭಾರತ ಒಟ್ಟು ಎಂಟು ಚಿನ್ನದ ಪದಕಗಳನ್ನು ಜಯಿಸಿದೆ.