udupixpress
Home Trending ಗಡಿ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸುವುದೇ ಭಾರತದ ಆಶಯ: ರಾಜನಾಥ್ ಸಿಂಗ್

ಗಡಿ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸುವುದೇ ಭಾರತದ ಆಶಯ: ರಾಜನಾಥ್ ಸಿಂಗ್

ಡಾರ್ಜಿಲಿಂಗ್: ಆಯುಧ ಪೂಜೆಯ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದರು. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ  ಗೌರವ ಸಲ್ಲಿಸಿದರು.

ಚೀನಾ ಜೊತೆಗಿನ ಗಡಿ ಸಂಘರ್ಷ ಶಾಂತಿಯುತವಾಗಿ ಬಗೆಹರಿಯಬೇಕು ಎಂಬುದು ಭಾರತ ಆಶಯ. ಭಾರತ ಒಂದೇ ಒಂದು ಇಂಚು ಭೂಮಿಯನ್ನೂ ಚೀನಾ ಆಕ್ರಮಿಸಲು ನಾವು  ಬಿಡುವುದಿಲ್ಲ. ನಿಮ್ಮಂತಹ ಧೈರ್ಯಶಾಲಿ ಯೋಧರಿಂದಾಗಿ ನಮ್ಮ ದೇಶದ ಗಡಿ ಸುರಕ್ಷಿತವಾಗಿದೆ. ಇಡೀ ದೇಶಕ್ಕೆ ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಹೇಳಿದರು.

error: Content is protected !!