ಭಾರತೀಯ ವಾಯುಪಡೆ: ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಹುದ್ದೆಗಳ ನೇಮಕಾತಿಗೆ
ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: 125

ಹುದ್ದೆಗಳ ವಿವರ

1) ಕಾರ್ಪೆಂಟರ್‌–03

2) ಮಲ್ಟಿ ಟಾಸ್ಕಿಂಗ್‌–103

3) ಕ್ಲರ್ಕ್–10

4) ಸ್ಟೋರ್‌ ಕೀಪರ್‌ –06

5) ಸೂಪರ್‌ ವೈಸರ್–03

6) ಪೇಂಟರ್‌–02

7) ಮೇಸ್‌ ಸ್ಟಾಪ್‌ –01

ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವೇತನ: ಕೇಂದ್ರ ಸರ್ಕಾರದ ವೇತನ ಆಯೋಗದ ಅನುಸಾರ ವೇತನ ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯಸ್ಸು: ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯೋಮಿತಿ ಮೀರಿರಬಾರದು.

ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧನಾದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್‌ಸೈಟ್‌ ನೋಡಬಹುದು.

ಅರ್ಜಿ ಸಲ್ಲಿಕೆ ಕೊನೆ ದಿನ: 30–09–2021

ವೆಬ್‌ಸೈಟ್‌: https://indianairforce.nic.in