ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಪತ್ನಿ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ

ಮಂಗಳೂರು: ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಶ್ ಪಾಂಡೆ ತಮ್ಮ ಪತ್ನಿ ಆಶ್ರಿತಾ ಶೆಟ್ಟಿ ಜೊತೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಭೇಟಿ ನೀಡಿದರು.

ಇಂದು ಬೆಳಿಗ್ಗೆ ತಮ್ಮ ಗೆಳೆಯನ ಜೊತೆ ಆಗಮಿಸಿದ ದಂಪತಿ ದೇವಸ್ಥಾನಕ್ಕೆ ಭೇಟಿ, ನಾಗದೇವರಿಗೆ ಆಶ್ಲೇಷ ಪೂಜೆಯನ್ನು ನೆರೆವೇರಿಸಿ, ಬಳಿಕ ಆದಿ ಸುಬ್ರಹ್ಮಣ್ಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರ ದರ್ಶನ ಪಡೆದರು.

ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಮನೀಶ್ ಪಾಂಡೆ ವಿವಾಹವು ತುಳು ನಟಿ ಆಶ್ರಿತಾ ಶೆಟ್ಟಿ ಜೊತೆ ಮುಂಬೈಯಲ್ಲಿ ನಡೆದಿದ್ದು, ಮದುವೆ ಆದ ಬಳಿಕ ಮೊದಲ ಬಾರಿಗೆ ದೇವಾಸ್ಥಾನಕ್ಕೆ ಬಂದಿದ್ದಾರೆ.