ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಮಣಿಸಿ ಚಿನ್ನ ಪದಕಕ್ಕೆ ಮುತ್ತಿಗೆ

ಬರ್ಮಿಂಗ್​ಹ್ಯಾಮ್​:​ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಫೆಡರೇಶನ್​ (ಐಬಿಎಸ್‌ಎ) ವಿಶ್ವ ಕ್ರೀಡಾಕೂಟದಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಫೆಡರೇಶನ್ ವಿಶ್ವ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಚಿನ್ನ ಗೆದ್ದಿದೆ.
ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಿದ ಕಾಂಗರೂ ಪಡೆ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 114ರನ್​ ಕಲೆ ಹಾಕಿತು.

ಮತ್ತೊಂದೆಡೆ ಭಾರತದ ಪುರುಷರ ಅಂಧರ ಕ್ರಿಕೆಟ್​ ತಂಡವು ಐಬಿಎಸ್​ಎ ವಿಶ್ವ ಕ್ರೀಡಾಕೂಟದಲ್ಲಿ ಫೈನಲ್​ ತಲುಪಿದೆ. ಅಂತಿಮ ಪಂದ್ಯದಲ್ಲಿ ಭಾರತ ಪಾಕಿಸ್ತಾನದೊಂದಿಗೆ ಸೆಣಸಲಿದೆ. ಪುರುಷರ ತಂಡವು ಚಿನ್ನದ ಮೇಲೆ ಕಣ್ಣಿಟ್ಟಿದೆ. ಇದಕ್ಕೂ ಮುನ್ನ ನಡೆದ ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಪಾಕಿಸ್ತಾನವು ಭಾರತ ತಂಡವನ್ನ ಮಣಿಸಿತ್ತು.

ಎರಡನೇ ಇನ್ನಿಂಗ್ಸ್​ ವೇಳೆ ಮಳೆ ಬಂದ ಕಾರಣ ಪಂದ್ಯವನ್ನ 9 ಓವರ್​ಗಳಿಗೆ ಇಳಿಸಿ ಭಾರತಕ್ಕೆ 43 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನ ಬೆನ್ನತ್ತಿದ ಭಾರತ ತಂಡದ ನಾರಿಯರು ಕೇವಲ 3.3 ಓವರ್​ಗಳಲ್ಲಿ 1 ವಿಕೆಟ್​ ನಷ್ಟಕ್ಕೆ 43 ರನ್​ ಕಲೆ ಹಾಕಿ ಗೆಲುವಿನ ನಗೆ ಬೀರಿದರು. ಈ ಮೂಲಕ ಮೊದಲ ಬಾರಿಗೆ ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳೆಯರು ಇತಿಹಾಸ ನಿರ್ಮಿಸಿದರು.

ಈ ಮೂಲಕ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಸಜ್ಜಾಗಿದೆ.ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಆಸೀಸ್​ ಟೀಂಅನ್ನು 9 ವಿಕೆಟ್​ಗಳಿಂದ ಸೋಲಿಸಿ ಭಾರತದ ನಾರಿಯರು ಇತಿಹಾಸ ನಿರ್ಮಿಸಿದ್ದಾರೆ. ಐಬಿಎಸ್​ಎ ವಿಶ್ವ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಭಾರತ ವಿಜಯ ಪತಾಕೆಯನ್ನು ಹಾರಿಸಿದೆ.