ದೇಶದ ಮೊದಲನೇ ಬುಡಕಟ್ಟು ಜನಾಂಗದ ಹಾಗೂ ಎರಡನೇ ಮಹಿಳಾ ರಾಷ್ಟ್ರಪತಿ: ದ್ರೌಪದಿ ಮುರ್ಮು

ನವದೆಹಲಿ: ಸ್ವತಂತ್ರ ಭಾರತದ ಇತಿಹಾಸದಲ್ಲಿ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಎನ್.ಡಿ.ಎ ಪಕ್ಷದ ಅಭ್ಯರ್ಥಿ ದ್ರೌಪದಿ ಮುರ್ಮು ವಿಪಕ್ಷಗಳ ಅಭ್ಯರ್ಥಿ ಯಶ್ವಂತ್ ಸಿನ್ಹಾ ಅವರನ್ನು ಸೋಲಿಸಿ ದೇಶದ 15ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಪದವಿಯನ್ನು ಅಲಂಕರಿಸಿದ್ದಾರೆ.

ಮೂರನೇ ಸುತ್ತಿನವರೆಗೆ 8,38,839  ಮೌಲ್ಯದ 3219 ಮಾನ್ಯ ಮತಗಳಲ್ಲಿ ದ್ರೌಪದಿ ಮುರ್ಮು 5,77,777 ಮೌಲ್ಯದ 2161 ಮತಗಳನ್ನು ಪಡೆದಿದ್ದಾರೆ. ಯಶವಂತ್ ಸಿನ್ಹಾ 2,61,062 ಮೌಲ್ಯದ 1058 ಮತಗಳನ್ನು ಪಡೆದಿದ್ದಾರೆ. ಎಣಿಕೆ ನಡೆಯುತ್ತಿದೆ ಆದರೆ ಮುರ್ಮುಗೆ ಸ್ಪಷ್ಟ ಬಹುಮತವಿದೆ ಮತ್ತು ಎಲ್ಲೆಡೆ ಸಂಭ್ರಮಾಚರಣೆ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ದ್ರೌಪದಿ ಮುರ್ಮು ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗುವ ನಿರೀಕ್ಷೆಯಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪರವಾಗಿ 17 ಸಂಸದರು, 17 ಟಿಎಂಸಿ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಅನೇಕ ವಿರೋಧ ಪಕ್ಷದ ಸಂಸದರು ಮತ್ತು ಶಾಸಕರು ಮುರ್ಮು ಪರವಾಗಿ ಅಡ್ಡ ಮತ ಹಾಕಿದ್ದಾರೆ. ಒಟ್ಟು 104 ವಿಧಾಯಕರು ಮುರ್ಮು ಪರವಾಗಿ ಅಡ್ಡ ಮತದಾನ ಮಾಡಿದ್ದಾರೆ.