ಮಾ.23 ರಂದು ಕೈಗಾರಿಕಾ ಸ್ಪಂದನ ಕಾರ್ಯಕ್ರಮ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮವು ಮಾರ್ಚ್ 23 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಚರ್ಚೆ ನಡೆಸಲಾಗುವುದು.

ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820- 2575650 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.