ಕೈಗಾರಿಕಾ ವಲಯದ ಕುಂದು ಕೊರತೆ: ಅಹವಾಲು ಸ್ವೀಕಾರ

ಉಡುಪಿ: ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಸಭೆ ಹಾಗೂ ಜಿಲ್ಲಾ ರಫ್ತು ಉತ್ತೇಜನಾ ಸಮಿತಿ ಸಭೆಯು ಜೂನ್ 16 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಕಚೇರಿಗೆ ಖುದ್ದಾಗಿ ಅಥವಾ [email protected] ಮೂಲಕ ಜೂನ್ 10 ರ ಒಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ: 0820-2575650 ಅನ್ನು ಸಂಪರ್ಕಿಸುವoತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.