ದಿ. ಸುನೀಲ್ ಚಾತ್ರ ಸ್ಮರಣಾರ್ಥ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಐ.ಎ.ಎಸ್, ಐ.ಪಿ.ಎಸ್ ಕುರಿತು ಮಾಹಿತಿ ಕಾರ್ಯಕ್ರಮ

ಕುಂದಾಪುರ: ಸೆಪ್ಟೆಂಬರ್ 6ರಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಮತ್ತು ಬೆಂಗಳೂರಿನ ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಇವರ ಸಹಯೋಗದಲ್ಲಿ ದಿ. ಸುನೀಲ್ ಚಾತ್ರ ಇವರ ಸವಿನೆನಪಿಗಾಗಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಐ.ಎ.ಎಸ್, ಐ.ಪಿ.ಎಸ್ ಹಾಗೂ ಕೆ.ಎ.ಎಸ್ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಕುಂದಾಪುರದ ಶ್ರೀ ದುರ್ಗಾಂಬಾ ಮೋಟಾರ್ಸ್ ನ ಮಾಲಕ ಸುಪ್ರೀತ್ ಚಾತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.

ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಯು.ಪಿ.ಎಸ್.ಸಿ ಫ್ಯಾಕಲ್ಟಿ ಪ್ರಭುಲಿಂಗ ಬಿ.ಕೆ. ಅವರು ಐ.ಎ.ಎಸ್,ಐ.ಪಿ.ಎಸ್ ಹಾಗೂ ಕೆ.ಎ.ಎಸ್ ಕುರಿತು ವಿಶೇಷ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ವಹಿಸಿದ್ದರು. ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇದರ ಅಧ್ಯಕ್ಷ ಸುರೇಶ್ ಮಲ್ಯ, ಓಂ ಟೈಲ್ಸ್ ನಾ ಸಚಿನ್ ನಕ್ಕತ್ತಾಯ, ಕುಂದಪ್ರಭ ಪತ್ರಿಕೆಯ ಸಂಪಾದಕಯು.ಎಸ್.ಶೆಣೈ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇದರ ಕಾರ್ಯದರ್ಶಿ ರಮಾನಂದ ಕಾರಂತ ಹಾಗೂ ಭಂಡಾರ್ಕಾರ್ಸ್ ಕಾಲೇಜಿನ ವೃತ್ತಿ ಮಾರ್ಗದರ್ಶನ ಕೋಶದ ಸಂಯೋಜಕರಾದ ಅಣ್ಣಪ್ಪ ಡಿ. ಉಪಸ್ಥಿತರಿದ್ದರು.

ರೋಟರಿ ಕ್ಲಬ್ ನ ವಲಯ ಲೆಪ್ಟಿನೆಂಟ್ ವಲಯ 1 ಉತ್ತಮ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿಯರಾದ ಸುಮಾ ನಿರೂಪಿಸಿ, ದಿವ್ಯ ಫೆರ್ನಾಂಡಿಸ್ ಸ್ವಾಗತಿಸಿ, ಪ್ರಜ್ಞಾ ಪಿ.ಹೆಗಡೆ ವಂದಿಸಿದರು.