ತ್ರಿಶಾ ಕ್ಲಾಸಸ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಸಿ.ಎಸ್.ಇ.ಇ.ಟಿ ಕುರಿತು ಮಾಹಿತಿ ಕಾರ್ಯಗಾರ

ಉಡುಪಿ: ಸತತ ಇಪ್ಪತ್ತೈದು ವರ್ಷಗಳಿಂದ ವಾಣಿಜ್ಯ ವಿಭಾಗದ ವೃತ್ತಿಪರ ಕೋರ್ಸ್ ಗಳ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನೂತನ ಸಿ.ಎಸ್.ಇ.ಇ.ಟಿ ಕುರಿತಾದ ಮಾಹಿತಿ ಕಾರ್ಯಗಾರವು ಜೂನ್ 15 ಗುರುವಾರದಂದು ಸಂಜೆ 6 ರಿಂದ 7:30ರ ವರೆಗೆ ಆನ್ಲೈನ್ ಮುಖಾಂತರ ನಡೆಯಲಿದೆ.

ಪ್ರಸ್ತುತ ಸಾಲಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಆದ ಕಂಪೆನಿ ಸೆಕ್ರೆಟರಿ ಬಗ್ಗೆ ತಿಳಿದುಕೊಳ್ಳಲು ಈ ಮಾಹಿತಿ ಕಾರ್ಯಾಗಾರವು ಉಪಯುಕ್ತವಾಗಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಉಡುಪಿಯ ಕೋರ್ಟ್ ಮುಂಭಾಗದ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಮಂಗಳೂರಿನ ಅಳಕೆಯ ಶ್ರೀನಿಧಿ ಕಾಂಪ್ಲೆಕ್ಸ್ ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.