ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಡಿ02 ರಂದು ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ತ್ರಿಶಾ ಕಾಲೇಜಿನ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಭಾಗವಹಿಸಿ ಮಾತನಾಡಿ, ಜೀವನದ ಪ್ರಮುಖ ಘಟ್ಟವಾಗಿರುವ ಪಿಯುಸಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವಾಗ ಉಂಟಾಗುವ ಗೊಂದಲ, ಆತಂಕಗಳನ್ನು ದೂರ ಮಾಡಿ ಆತ್ಮ ವಿಶ್ವಾಸ ರೂಪಿಸಿಕೊಳ್ಳುವ ಬಗ್ಗೆ ಮತ್ತು ಉತ್ತಮ ಭವಿಷ್ಯದ ಕನಸು ಕಟ್ಟಿಕೊಂಡಿರುವ ವಿದ್ಯಾರ್ಥಿಗಳು ಪಿಯುಸಿ ನಂತರ ಮುಂದೇನು ಎನ್ನುವ ಗೊಂದಲಕ್ಕೆ ತೆರೆ ಎಳೆದು ಜೀವನದಲ್ಲಿ ಯಶಸ್ವಿಯಾಗಲು ಆಯ್ಕೆ ಮಾಡಬೇಕಾದ ಕೋರ್ಸ್ ಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಅಧ್ಯಕ್ಷತೆ ವಹಿಸಿದ್ದರು.

ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಸುಶಾಂತ್ ನಾಯಕ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಇಂಗ್ಲೀಷ್ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ಸ್ವಾಗತಿಸಿದರು, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸವಿತಾ ರಮೇಶ್ ವಂದಿಸಿದರು, ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ನಿರೂಪಿಸಿದರು.