ಮಂಗಳೂರು: ನಗರದ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಮತ್ತು ಯೂತ್ ರೆಡ್ ಕ್ರಾಸ್ (ವೈ.ಆರ್.ಸಿ.) ಘಟಕಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಸ್ವಯಂ ಸೇವಕರಿಗೆ ಒಂದು ದಿನದ ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಹ್ಯಾದ್ರಿ ಕಾಲೇಜು ಮಂಗಳೂರಿನ ಕಾರ್ಯತಂತ್ರ ಯೋಜನಾ ವಿಭಾಗದ ಮುಖ್ಯಸ್ಥ ರಮೇಶ್ ಕೆ.ಜಿ., ವ್ಯಕ್ತಿಯೊಬ್ಬನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಎನ್.ಎಸ್.ಎಸ್ ಮತ್ತು ವೈ.ಆರ್.ಸಿ. ಗಳ ಪಾತ್ರ ಬಹಳ ಮಹತ್ವದ್ದಾಗಿದೆ. ಸಾಮಾಜಿಕ ಜೀವನವನ್ನು ಹಸನಾಗಿಸಲು ಇಂತಹ ಸಂಸ್ಥೆಗಳು ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಗಿರೀಶ್ ಮಾಡ್ಲ, ಎನ್.ಎಸ್.ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ಚಂದನ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಪ್ರೊ.ಶಿಲ್ಪ ಶೆಟ್ಟಿ, ಹಾಗೂ ಸಂಧ್ಯಾ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಂಯೋಜನಾಧಿಕಾರಿ ಪ್ರೊ. ಎಡ್ಲಿನ್ ಜೋತ್ಸ್ನಾ ಪಿಂಟೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅನನ್ಯ ನಿರೂಪಿಸಿ, ಫರ್ವಾತ್ ಮಹಮ್ಮದ್ ವಂದಿಸಿದರು.