ಹೆಬ್ರಿ: ಇಲ್ಲಿನ ಠಾಣಾ ಸರಹದ್ದಿನಲ್ಲಿ ಪ್ರತಿನಿತ್ಯ ಹೆಚ್ಚಿನ ರಸ್ತೆ ಅಪಘಾತಗಳು ನಡೆಯುತ್ತಿದ್ದು, ಇಂತಹ ಸ್ಥಳಗಳಲ್ಲಿ ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಮುನ್ನೆಚ್ಚರಿಕಾ ಫಲಕಗಳನ್ನು ಅಳವಡಿಸಲಾಗಿದೆ.
ಈ ಬಗ್ಗೆ ಜಿಲ್ಲಾ ಎಸ್.ಪಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರು ಟ್ವೀಟ್ ಮಾಡಿದ್ದಾರೆ.
ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಹೆಬ್ರಿ ಠಾಣಾ ಸರಹದ್ದಿನಲ್ಲಿ ಹೆಚ್ಚಾಗಿ ಅಪಘಾತ ಸಂಭವಿಸಿ ಜೀವ ಹಾನಿ ಆಗುವಂತಹ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಪಘಾತ ಸೂಚನಾ ಫಲಕಗಳನ್ನು ಅಳವಡಿಸಿ ಅಪಘಾತ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಲಾಯಿತು ಎಂದು ಅವರು ತಿಳಿಸಿದ್ದಾರೆ.