ಬ್ರಹ್ಮಾವರ: ಗುರುವಾರದಂದು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಾಹಿತ್ಯ ಸಂಘದ ವತಿಯಿಂದ ಪದವಿಪೂರ್ವ ಅಂತರ್ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಥಳೀಯ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದ ಮತ್ತು ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಇವರು ಅಭಿನಂದಿಸಿದರು.
ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಮಮತಾ ಮತ್ತು ಪ್ರಾಂಶುಪಾಲೆ ಶ್ರೀಮತಿ ಡಾ ಸೀಮಾ ಭಟ್ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಹರ್ಷಿತಾ ನಿರೂಪಿಸಿದರು, ವಿನಿಲಾ ವಂದಿಸಿದರು.