ಫೆಬ್ರವರಿ 27 ರಂದು ಸಿ.ಆರ್.ಝಡ್ ಕಾಯ್ದೆ ಕುರಿತು ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ

ಉಡುಪಿ: ಕರಾವಳಿ ನಿಯಂತ್ರಣ ವಲಯ (ಸಿ.ಆರ್.ಝಡ್) ಕಾಯ್ದೆಯ ಕುರಿತು ಜಿಲ್ಲೆಯ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ಕಾರ್ಯಕ್ರಮವು ಫೆಬ್ರವರಿ 27 ರಂದು ಮಧ್ಯಾಹ್ನ 3.30 ಕ್ಕೆ ನಗರದ ಮಣಿಪಾಲ ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದ್ದು, ಕರಾವಳಿ ನಿಯಂತ್ರಣ ವಲಯದ ಜಿಲ್ಲಾ ಪ್ರಾದೇಶಿಕ ನಿರ್ದೇಶಕರು (ಪರಿಸರ) ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಿಲ್ಲೆಯ ಎಲ್ಲಾ ಕೈಗಾರಿಕೋದ್ಯಮಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ದೂ: 9448623952 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.