ನವದೆಹಲಿ: ಮುಂದಿನ ಜುಲೈ 15ರವರೆಗೆ ಅಂತರರಾಷ್ಟ್ರೀಯ ಎಲ್ಲಾ ವಿಮಾನಯಾನ ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ. ನಿರ್ದಿಷ್ಟ ಪ್ರಕರಣಗಳನ್ನು ಆಧರಿಸಿ ಆಯ್ದ ಮಾರ್ಗಗಳಲ್ಲಿ ಅನುಮತಿ ನೀಡಬಹುದು ಎಂದು ತಿಳಿಸಿದೆ.
ದೇಶದಲ್ಲಿ ಸದ್ಯಕ್ಕೆ ವಂದೇ ಮಾತರಂ ಮಿಷನ್ ಅಡಿಯಲ್ಲಿ ಏರ್ ಇಂಡಿಯಾ ಮತ್ತು ಕೆಲ ಖಾಸಗಿ ವೈಮಾನಿಕ ಸಂಸ್ಥೆಗಳು ಕೆಲವೊಂದು ವಿಮಾನ ಸೇವೆಯನ್ನು ಒದಗಿಸುತ್ತಿದೆ.