ವಿದ್ಯಾರ್ಥಿಗಳಿಗಾಗಿ ಅಂತಾರಾಷ್ಟ್ರೀಯ ಪತ್ರ ಬರೆಯುವ ಸ್ಪರ್ಧೆ

ಉಡುಪಿ: ಅಂಚೆ ಇಲಾಖೆಯ ವತಿಯಿಂದ ಯು.ಪಿ.ಯು ಅಂತಾರಾಷ್ಟ್ರೀಯ ಪತ್ರ ಬರೆಯುವ ಸ್ಪರ್ಧೆಯ ಪ್ರಯುಕ್ತ 9 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ “At 150 years old, the UPU has served people around the world for more than eight generations. The world has changed enormously since then” ಎಂಬ ವಿಷಯದ ಕುರಿತು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಪತ್ರ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ದೂ.ಸಂಖ್ಯೆ:0820-2526144, 2520471 ಅಥವಾ 2521780 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.