ಉಡುಪಿ: ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಉಡುಪಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣ (ಲಾನ್ ಟೆನಿಸ್) ದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.