ಬೀದರ್: ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ ಎಸ್‌ಐಟಿಗೆ ಕೆಲವೆಡೆ ಮಾನವನ ಅಸ್ಥಿಸಿಕ್ಕಿದ್ದು, ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ವರದಿಗಾರರ ಜತೆ ಮಾತನಾಡಿದ ಅವರು, ಅರಣ್ಯದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ ಬೇಜವಾಬ್ದಾರಿತನ, ನಿರ್ಲಕ್ಷ್ಯ ತೋರಿದ ಅರಣ್ಯ ಅಧಿಕಾರಿ, ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.












