udupixpress
Home Trending ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಉಡುಪಿ ಜುಲೈ 3: 2019-20ನೇ ಸಾಲಿನ ಸ್ವಯಂ ಉದ್ಯೋಗ, ಸಮೃದ್ಧಿ, ಉನ್ನತಿ, ಐರಾವತ, ಪ್ರೇರಣಾ, ಸ್ಪೂರ್ತಿ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ, ಅರ್ಹ ಸಫಾಯಿ ಕರ್ಮಚಾರಿ/ಸ್ಕಾವೆಂರ‍್ಸ್ ಹಾಗೂ ಅವರ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.

ಆಸಕ್ತಿಯುಳ್ಳವರು ನಿಗಮದ ವೆಬ್‌ಸೈಟ್ www.ksskdc.kar.nic.in ಮುಖಪುಟ ಮೆನುವಿನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, “ಬಿ” ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 302, ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ-576105 ಗೆ ಸಂಪರ್ಕಿಸಬಹುದೆಂದು ಉಡುಪಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!