udupixpress
Home Sport ಕೊನೆಗೂ ಬಿಡುಗಡೆಗೊಂಡಿತು ಐಪಿಎಲ್ ವೇಳಾಪಟ್ಟಿ: ಉದ್ಘಾಟನಾ ಪಂದ್ಯದಲ್ಲಿ ಈ ಎರಡು ತಂಡಗಳು ಕಣಕ್ಕಿಳಿಯಲಿವೆ

ಕೊನೆಗೂ ಬಿಡುಗಡೆಗೊಂಡಿತು ಐಪಿಎಲ್ ವೇಳಾಪಟ್ಟಿ: ಉದ್ಘಾಟನಾ ಪಂದ್ಯದಲ್ಲಿ ಈ ಎರಡು ತಂಡಗಳು ಕಣಕ್ಕಿಳಿಯಲಿವೆ

ದುಬೈ: ಕೊರೊನಾ ಭೀತಿಯ ನಡುವೆಯೂ ಭಾರೀ ನಿರೀಕ್ಷೆಯ ಐಪಿಎಲ್ ಟೂರ್ನಿ ನಡೆಯುತ್ತಿದ್ದು, ಕೊನೆಗೂ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದೆ.

ಭಾರತದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ಈ ಬಾರಿಯ ಐಪಿಎಲ್ ಯುಎಇನಲ್ಲಿ ಆಯೋಜಿಸಲಾಗಿದೆ.

ಸೆ. 19ರಂದು ಅಬುಧಾಬಿಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ಸ್ ಅಪ್ ಚೆನ್ನೈ ಸೂಪರ್ ಕಿಂಗ್ಸ್‌ ಸೆಣಸಾಟ ನಡೆಸಲಿದೆ.

ಸೆ. 20ರಂದು ನಡೆಯುವ ಟೂರ್ನಿಯ ಎರಡನೇ  ಪಂದ್ಯದಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ಮುಖಾಮುಖಿಯಾಗಲಿವೆ. ಸೆ. 21ರಂದು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಸನ್‌ರೈಸರ್ಸ್‌ ವಿರುದ್ಧ ಕಣಕ್ಕಿಳಿಯಲಿದೆ. ಈ ಎರಡು ಪಂದ್ಯಗಳು ದುಬೈನಲ್ಲಿ ನಡೆಯಲಿದೆ.

ನವೆಂಬರ್‌ 3ರ ವರೆಗೆ ನಡೆಯುವ ಲೀಗ್ ಹಂತದ 48 ಪಂದ್ಯಗಳ ಪಟ್ಟಿಯನ್ನು ಬಿಡುಗಡೆಗೊಂಡಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30 ಮತ್ತು ಸಂಜೆ 7.30ಕ್ಕೆ ಪಂದ್ಯಗಳು ಆರಂಭವಾಗುತ್ತವೆ.
ದುಬೈನಲ್ಲಿ 24, ಅಬುಧಾಬಿಯಲ್ಲಿ 20 ಮತ್ತು ಶಾರ್ಜಾದಲ್ಲಿ 12 ಪಂದ್ಯಗಳು ನಡೆಯಲಿವೆ.

error: Content is protected !!