ಸೂರು ಕೊಡಿಸಿದ ಅಧಿಕಾರಿಗೆ ಕೃತಜ್ಞತೆ

ಕುಂದಾಪುರ: ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯಕ್ರಿಯೆ ಭಾನುವಾರ ಕುಂದಾಪುರ ತಾಲೂಕಿನ ಯಡಾಡಿ -ಮತ್ಯಾಡಿ ಗ್ರಾಮದ ಫಾರ್ಮ್ ಹೌಸ್ ನಲ್ಲಿ ನೆರವೇರಿತು.ತಂದೆ ವಡ್ಡರ್ಸೆ ರಘುರಾಮ ಶೆಟ್ಟಿ ,ತಾಯಿ ಪ್ರಫುಲ್ಲ  ಶೆಟ್ಟಿ ಅವರ ಸಮಾಧಿಯ ಪಕ್ಕದಲ್ಲಿ ಮಧುಕರ ಶೆಟ್ಟಿಯವರ ಅಂತ್ಯ ಸಂಸ್ಕಾರ ನಡೆಯಿತು.ದಕ್ಷ ಅಧಿಕಾರಿಯ ಸಾವಿಗೆ ಸಾವಿರಾರು ಜನರು ಕಂಬನಿ ಮಿಡಿದರು.

ಮಧುಕರ್ ಶೆಟ್ಟಿ ಚಿಕ್ಕಮಗಳೂರು ಜಿಲ್ಲೆಯ ಎಸ್ಪಿ ಆಗಿದ್ದಾಗ ಯಲಗುಡಿಗೆ  ಗ್ರಾಮದ ಬಳಿ ಭೂಮಾಲೀಕನೊಬ್ಬನ ಒತ್ತುವರಿ ತೆರವುಗೊಳಿಸಿ ಮೂಲನಿವಾಸಿಗಳಿಗೆ ಜಮೀನು ಬಿಡಿಸಿ ಕೊಟ್ಟಿದ್ದರು. ಮಧುಕರ್ ಶೆಟ್ಟಿ ಮೇಲಿನ ಪ್ರೀತಿಗೆ ಜನ ಊರಿನ ಹೆಸರನ್ನು ಗುಪ್ತ ಶೆಟ್ಟಿಹಳ್ಳಿ ಎಂದು ನಾಮಕರಣ ಮಾಡಿದ್ದರು.

ಮಧುಕರ್ ಶೆಟ್ಟಿ ಅವರ ಸಾವಿನ ವಿಚಾರ ತಿಳಿದು ಅವರಿಗೆ ಅಂತಿಮ ನಮನ  ಸಲ್ಲಿಸಲು ಗುಪ್ತ ಶೆಟ್ಟಿ ಹಳ್ಳಿಯಿಂದ ಗ್ರಾಮಸ್ಥರು ಬಂದಿದ್ದರು ದಕ್ಷ ಅಧಿಕಾರಿಯ ನೆನೆದು ಕಣ್ಣೀರು ಸುರಿಸಿದರು.